Hide Main content block
ಪ್ರೊ. ಡಿ.ಎನ್ ಪಾಟೀಲರು ಅರ್ಥಶಾಸ್ತ್ರ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ತಮ್ಮ ಸೇವೆಯನ್ನು 27 ಆಗಸ್ಟ್ 1997ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರ ಬೆಳಗಾವಿಯಲ್ಲಿ ಆರಂಭಿಸಿದರು. 20 ವರ್ಷಗಳಿಗಿಂತಲೂ ಹೆಚ್ಚು ಅವಧಿಯ ವೃತ್ತಿ ಪ್ರವಚನ ಹಾಗೂ ಸಂಶೋಧನಾ ಅನುಭವವನ್ನು ಹೊಂದಿದ್ದಾರೆ. ಇವರು 39 ಸಂಶೋಧನಾ ಲೇಖನಗಳನ್ನು ಹಾಗೂ ಹಲವು ಪುಸ್ತಕಗಳ ಸಂಪಾದನೆಯನ್ನು ಮಾಡಿ ಪ್ರಕಟಿಸಿರುವರು. ಇವರು 35 ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡನೆ ಮಾಡಿದ್ದಾರೆ. ಮತ್ತು 5 ಪಿಎಚ್.ಡಿ ಹಾಗೂ 06 ಎಮ್ಪಿಲ್ ಸಂಶೋಧನಾರ್ಥಿಗಳಿಗೆ ಮಾರ್ಗದರ್ಶನ ನೀಡಿರುವರು. ಪ್ರೊ. ಡಿ.ಎನ್ ಪಾಟೀಲ ಅವರು ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರು, ಸ್ಕೂಲ್ ಆಪ್ ಬಿಸಿನೆಸ್ ಮತ್ತು ಎಕಾನಾಮಿಕ್ಸ್ ನಿದೇಶಕರು, ಸಿಂಡಿಕೇಟ ಸದಸ್ಯರು, ವಿದ್ಯಾವಿಷಯಕ ಪರಿಷತ್ ಸದಸ್ಯರು, ವಿದ್ಯಾರ್ಥಿ ಕಲ್ಯಾಣ ವಿಭಾಗದ ಅಧ್ಯಕ್ಷರು ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ, ಪ್ರಸ್ತುತ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.