PANDIT DEEN DAYAL UPADHAYAYA STUDY CHAIR

ಪ್ರಸ್ತಾವಣೆ:
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠವು ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದ ಅಧೀನದಲ್ಲಿ 2017 ರಲ್ಲಿ ಪ್ರಾರಂಭವಾಗಿದೆ. ಅಧ್ಯಯನ ಪೀಠದ ಕಾರ್ಯ ಚಟುವಟಿಕೆಗಳ ನಿರ್ವಹಣೆಗೆ ಸಂಸ್ಕೃತಿ ಸಚಿವಾಲಯದದಿಂದ 5.78 ಕೋಟಿ ರೂ. ಗಳ ಭದ್ರತಾ ಠೇವಣಿ ಪಡೆಯಲಾಗಿದೆ.

ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಾಮಾಜಿಕ ಮತ್ತು ಶೈಕ್ಷಣಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದಕ್ಕಾಗಿ ಮಾನ್ಯ ಕುಲಪತಿಗಳ ಅಧ್ಯಕ್ಷತೆಯಲ್ಲಿ ಒಂದು ಸಲಹಾ ಸಮಿತಿಯನ್ನು ರಚಿಸಲಾಗಿದೆ. ಅಧ್ಯಯನ ಪೀಠದ ಸಂಯೋಜಕರು ಅಧ್ಯಯನ ಪೀಠದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಾರೆ. ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ವಜುಬಾಯಿ ವಾಲಾ ಅವರು ಈ ಅಧ್ಯಯನ ಪೀಠವನ್ನು ಉದ್ಘಾಟಿಸಿದರು. ದೆಹಲಿಯ ದೀನದಯಾಳ ಸಂಶೋಧನಾ ಕೇಂದ್ರದ ನಿರ್ದೇಶಕರಾದ ಶ್ರೀ ಅತುಲ ಜೈನ್, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ. ಸಿದ್ದು ಪಿ. ಆಲಗೂರ, ಕುಲಸಚಿವರಾದ (ಮೌಲ್ಯಮಾಪನ) ಪ್ರೊ. ರಂಗರಾಜ ವನದುರ್ಗ ಮತ್ತು ಹಣಕಾಸು ಅಧಿಕಾರಿಗಳಾದ ಪ್ರೊ. ಪರಶುರಾಮ ದುಡಗುಂಟಿ ಉಪಸ್ಥಿತರಿದ್ದರು.


Top